ಅತ್ಯಾಚಾರವೆಸಗಿದ ವ್ಯಕ್ತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಫೆ.21- ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಫೋಸ್ಕೋ ವಿಶೇಷ ನ್ಯಾಯಾಲಯ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 31ಸಾವಿರ ರೂ.ಗಳ ದಂಡ ವಿಧಿಸಿದೆ. ಜೆಪಿ ನಗರದ ನಾಚನಹಳ್ಳಿ ಪಾಳ್ಯದ ನಿವಾಸಿ ಮಣಿ(35) ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ.

ಈತ ತನ್ನ ಮನೆ ಸಮೀಪದಲ್ಲಿ ಇರುವ ಅಪ್ರಾಪ್ತೆಯೊಬ್ಬಳನ್ನು ಹೆದರಿಸಿ ಆಕೆಯ ಮೇಲೆ ಅತ್ಯಾಚಾರವೆಸಗಿದನು. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈತನನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದರು.

ವಿಚಾರಣೆ ನಡೆಸಿದ ಮೈಸೂರಿನ ಪೊಸ್ಕೋ ವಿಶೇಷ ನ್ಯಾಯಾಲಯ ದ ನ್ಯಾಯಾಧೀಶರಾದ ಜಯಶ್ರೀ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಬಿ.ಎಸ್.ಶಿವರುದ್ರಸ್ವಾಮಿ ಅವರು ವಾದ ಮಂಡಿಸಿದ್ದಾರೆ.

Facebook Comments