‘ನಮ್ಮಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ’ : ಶಾಸಕ ನಾರಾಯಣ್ ಗೆ ಸಾ.ರಾ.ಮಹೇಶ್ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.22- ನಮ್ಮಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ ಶಾಸಕ ನಾರಾಯಣ್ ಅವರ ಹೇಳಿಕೆಗೆ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಒಂದು ತೀರ್ಮಾನ ಕೈಗೊಂಡಿದೆ. ಅದರಂತೆ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ ಸಿಎಂ ಹುದ್ದೆ ಖಾಲಿ ಇಲ್ಲ.

ಯಾರೋ ಒಬ್ಬರು ಏನೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವೇ? ಎಂದು ಪ್ರಶ್ನಿಸಿದರು.  ಶಾಸಕ ನಾರಾಯಣ್ ಅವರು ಲೋಕಸಭೆ ಚುನಾವಣೆ ಬಳಿಕ ಮೂರ್ನಾಲ್ಕು ತಿಂಗಳಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನೀಡಿದ್ದ ಹೇಳಿಕೆ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಅವರಂತೆ ಮಾತನಾಡಬಾರದು.

ಇಂತಹ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಬಹಿರಂಗವಾಗಿ ಚರ್ಚಿಸಬಾರದು ಎಂದು ಹೇಳಿದರು.

Facebook Comments

Sri Raghav

Admin