ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಒಗ್ಗೂಡಲು ಪ್ರಧಾನಿ ಕರೆ

ಈ ಸುದ್ದಿಯನ್ನು ಶೇರ್ ಮಾಡಿ

ಸಿಯೋಲ್, ಫೆ.22- ದೊಡ್ಡ ಕಂಟಕವಾಗಿ ಪರಿಣಮಿಸಿರುವ ಭಯೋತ್ಪಾದನೆಯ ಜಾಲವನ್ನು ನಿರ್ಮೂಲನೆ ಮಾಡಲು ಜಾಗತಿಕ ಸಮುದಾಯ ಒಗ್ಗೂಡಿ ಕಾರ್ಯ ನಿರ್ವಹಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ದಕ್ಷಿಣ ಕೋರಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ರಾಷ್ಟ್ರಾಧ್ಯಕ್ಷ ಮೂನ್ ಜಾಯಿ ಇನ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪುಲ್ವಾಮಾದಲ್ಲಿ 40ಕ್ಕೂ ಹೆಚ್ಚು ಯೋಧರನ್ನು ಬಲಿ ತೆಗೆದುಕೊಂಡ ಉಗ್ರರ ಕುಕೃತ್ಯದ ಬಗ್ಗೆ ಪ್ರಸ್ತಾಪಿಸಿದ ಅವರು, ಇಂತಹ ಘಟನೆಗಳು ಮರುಕಳುಹಿಸಲು ಅಕವಾಶ ಮಾಡಿಕೊಡಬಾರದು. ಇದರ ವಿರುದ್ಧ ವಿಶ್ವ ಸಮುದಾಯ ಒಗ್ಗೂಡಬೇಕು ಮತ್ತು ಉಗ್ರರ ಜಾಲಗಳನ್ನು ಮಟ್ಟಹಾಕಲು ಶ್ರಮಿಸಬೇಕೆಂದು ಸಲಹೆ ಮಾಡಿದರು.

ಪುಲ್ವಾಮಾ ಉಗ್ರರ ದಾಳಿಯನ್ನು ಖಂಡಿಸಿ ಹುತಾತ್ಮ ಯೋಧರ ಕುಟುಂಬಗಳಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ ಕೋರಿಯನ್ನರಿಗೆ ಮೋದಿ ಕೃತಜ್ಞತೆ ಸಲ್ಲಿಸಿದರು.

Facebook Comments