ವರದಕ್ಷಿಣೆ ಕಿರುಕುಳ ಆರೋಪ,ಸಹನಟ ರಾಜೇಶ್ ಧ್ರುವಗೆ ನಿರೀಕ್ಷಣಾ ಜಾಮೀನು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.22- ಪತ್ನಿಗೆ ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿದ್ದ ಅಗ್ನಿ ಸಾಕ್ಷಿ ಧಾರಾವಾಹಿಯ ಸಹನಟ ರಾಜೇಶ್ ಧ್ರುವ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ರಾಜೇಶ್ ಧ್ರುವ 2017ರಲ್ಲಿ ಶೃತಿ ಅವರನ್ನು ಮದುವೆಯಾಗಿದ್ದರು. ನಂತರ ಅವರಿಗೆ ವರದಕ್ಷಿಣೆ ತರುವಂತೆ ಕಿರುಕುಳ ನೀಡಿದ್ದಾರೆ. ಅಲ್ಲದೆ ಮಾನಸಿಕ ಹಿಂಸೆ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಶೃತಿ ತಮ್ಮ ಪತಿ ರಾಜೇಶ್ ವಿರುದ್ಧ ಬಸವನಗುಡಿ ಮಹಿಳಾ ಠಾಣೆ ದೂರು ದಾಖಲಿಸಿದ್ದರು.

ಈ ದೂರಿನ ಸಂಬಂಧ ರಾಜೇಶ್ ಧ್ರವ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಜೇಶ್ ಇಂದು ಬಸವನಗುಡಿ ಮಹಿಳಾ ಠಾಣೆ ಅಧಿಕಾರಿ ಸತ್ಯವತಿ ಅವರ ಮುಂದೆ ಹಾಜರಾಗಿ ತಮ್ಮ ವಿರುದ್ಧ ದಾಖಲಾಗಿದ್ದ ದೂರಿನ ಬಗ್ಗೆ ಉತ್ತರ ನೀಡಿದ್ದಾರೆ.

Facebook Comments