ಕಲಾಕಾರರ ಪ್ರೋತ್ಸಾಹಕ್ಕಾಗಿ ಚಿತ್ತಾರ ಮೇಳ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.22- ಕಲಾಕಾರರ ಕಲಾಕೃತಿಗಳಿಗೆ ಪ್ರೋತ್ಸಾಹ ನೀಡಲು ಚಿತ್ತಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ.ಬಿ.ಎಲ್.ಶಂಕರ್ ಹೇಳಿದರು.  ಕರ್ನಾಟಕ ಚಿತ್ರಕಲಾ ಪರಿಷತ್ ತನ್ನ ಆವರಣದಲ್ಲಿ ಆಯೋಜಿಸಲಾಗಿರುವ 10 ದಿನದ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನಿಂದ ಮಾರ್ಚ್ 3 ರವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಈ ಚಿತ್ತಾರ ಮೇಳ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ಈ ಚಿತ್ತಾರ ಮೇಳ ಕರಕುಶಲ ಪ್ರದರ್ಶನ ಮತ್ತು ಮಾರಾಟ ಮೇಳದ ವಿಶೇಷವೆಂದರೆ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ ಎಂದರು.

ದೇಶದ ಕಲಾವಿದರ ಕಲಾಕೃತಿಗಳಿಗೆ ಪ್ರೋತ್ಸಾಹ ನೀಡುವುದು ಚಿತ್ರಕಲಾ ಪರಿಷತ್ತಿನ ಉದ್ದೇಶವಾಗಿದೆ. ದೇಶದ ಎಲ್ಲಾ ಭಾಗಗಳ ಕಲಾವಿದರಿಗೆ, ಕರಕುಶಲಕಾರರಿಗೆ ಹಾಗೂ ಅವರ ಕಲಾಕೃತಿಗಳಿಗೆ ಸೂಕ್ತ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಸಹಕಾರಿ ಎಂದು ತಿಳಿಸಿದರು.

ಉದ್ಘಾಟನಾ ಕಾರ್ಯಕ್ರದಲ್ಲಿ ಕಿರುತೆರೆ ನಟಿ ಹಾಗೂ ರಂಗಕರ್ಮಿ ಸುನೇತ್ರಾ ಪಂಡಿತ್ ಹಾಗೂ ಖ್ಯಾತ ನಿರ್ದೇಶಕ ರವಿ ಆರ್ ಗರಣಿ, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಪ್ಪಾಜಯ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

Facebook Comments