ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಕಾರ್ಯಕರ್ತರ ಹಲ್ಲೆ

ಈ ಸುದ್ದಿಯನ್ನು ಶೇರ್ ಮಾಡಿ

ನಾಗ್ಪುರ, ಫೆ.22- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಮಹಾರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಯುವ ಘಟಕದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ನಾಗ್ಪುರದ ಯವತ್ಮಾಲ್ ಕಾಲೇಜಿನ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಬುಧವಾರ ರಾತ್ರಿ ಯುವ ಸೇನಾ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ನಡೆದ ದಾಳಿಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು, ಯುವ ಸೇನಾ ಕಾರ್ಯಕರ್ತರ ವಿರುದ್ಧ ಯವತ್ಮಾಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.

ವೈಭವನಗರದಲ್ಲಿ ವಾಸಿಸುತ್ತಿದ್ದ ದಯಾಭಾಯಿ ಪಟೇಲ್ ದೈಹಿಕ ಶಿಕ್ಷಣ ಕಾಲೇಜ್‍ನ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದಿದೆ ಎಂದು ಯವತ್ಮಾಲ್ ಪೊಲೀಸ್ ವರಿಷ್ಠಾಧಿಕಾರಿ ಎಂ.ರಾಜಕುಮಾರ್ ತಿಳಿಸಿದ್ದಾರೆ.

Facebook Comments

Sri Raghav

Admin