ಉಗ್ರರ ದಾಳಿ ವಿರುದ್ಧ ಪ್ರತೀಕಾರಕ್ಕೆ ಆಗ್ರಹಿಸಿ ಫೆ.28 ರಾಜಭವನ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಫೆ.22- ಪುಲ್ವಾಮಾ ದಲ್ಲಿ ಉಗ್ರರ ದಾಳಿಗೆ ಪ್ರತೀಕಾರಕ್ಕೆ ಆಗ್ರಹಿಸಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕೊಡುವಂತೆ ಒತ್ತಾಯಿಸಿ ಹಾಗೂ ಕಾಂಗ್ರೆಸ್, ಬಿಜೆಪಿ ರಾಜಕೀಯ ಬಿಡಬೇಕು ಎಂದು ಒತ್ತಾಯಿಸಿ ಫೆ.28 ರಂದು ಕನ್ನಡ ಪರ ಸಂಘಟನೆಗಳು ರಾಜಭವನ ಮುತ್ತಿಗೆ ಹಾಕುವುದಾಗಿ ತಿಳಿಸಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜು, ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾದ 40 ಯೋಧರಿಗೆ ತಲಾ 1 ಕೋಟಿ ನೀಡುವಂತೆ ಒತ್ತಾಯಿಸಿದರು.

ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡುವುದಕ್ಕಾಗಿ ವಿಶೇಷ ಪಾರ್ಲಿಮೆಂಟ್ ಅಧಿವೇಶನ ಕರೆದು ಅಧಿವೇಶನದಲ್ಲಿ ಪ್ರತಿಯೊಬ್ಬರ ಮಾತನ್ನು ಗಣನೆಗೆ ತೆಗೆದುಕೊಂಡು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುವುದರ ಬಗ್ಗೆ ಪ್ರಧಾನಿಯವರು ಗಂಭೀರ ಚಿಂತನೆ ಮಾಡಬೇಕು ಎಂದು ಆಗ್ರಹಿಸಿದರು.

ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡುವವರೆಗೂ ವಿವಿಧ ಹಂತಗಳಲ್ಲಿ ಮುತ್ತಿಗೆ ಹಮ್ಮಿಕೊಳ್ಳ ಲಾಗುವುದು ಎಂದರು. ಬಂಡೀಪುರದಲ್ಲಿ 600 ಎಕರೆ ಪ್ರದೇಶಕ್ಕೆ ಬೆಂಕಿ ಬಿದ್ದ ಕಾರಣ ಪ್ರಾಣಿ ಪಕ್ಷಿಗಳು ಸತ್ತು ಹೋಗಿವೆ.

ಇದಕ್ಕೆ ಕಾರಣ ಯಾರು ಎಷ್ಟು ಪ್ರಾಣಿ ಪಕ್ಷಿಗಳು ಸುಟ್ಟು ಹೋಗಿವೆ ಎಂಬುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಗಿರೀಶ್ ಗೌಡ. ಮುಬಾರಕ್ ಪಾಷ ಎನ್.ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

Facebook Comments