ಅಸ್ಸಾಂನಲ್ಲಿ ಕಳಭಟ್ಟಿ ದುರಂತ, ಸತ್ತವರ ಸಂಖ್ಯೆ 56ಕ್ಕೇರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಗುವಾಹಟಿ, ಫೆ.23- ಅಸ್ಸಾಂನ ಗೋಲಾಘಾಟ್‍ನಲ್ಲಿ ವಿಷಕಾರಿ ಮದ್ಯ ಸೇವಿಸಿ ಒಂಬತ್ತು ಮಹಿಳೆಯರು ಸೇರಿದಂತೆ ಟೀ ತೋಟದ 56 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ನಡೆದಿದೆ. ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಇತ್ತೀಚೆಗೆ ಕಳ್ಳಭಟ್ಟಿ ದುರಂತದಲ್ಲಿ 100ಕ್ಕೂ ಹೆಚ್ಚು ಜನ ಬಲಿಯಾದ ದುರ್ಘಟನೆಯ ಹಿಂದೆಯೇ ಈಶಾನ್ಯ ರಾಜ್ಯದಲ್ಲಿ ಮತ್ತೊಂದು ಅನಾಹುತ ಸಂಭವಿಸಿದೆ.

ವಿಷಕಾರಿ ಮದ್ಯ ಸೇವಿಸಿದ ಹಲವು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ. ಮೃತರಲ್ಲಿ ಹೆಚ್ಚಿನವರು ಗೋಲಾಘಾಟ್ನ ಶಾಲಮಾರ ಪ್ರಾಂತ್ಯದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಸುಮಾರು 100 ಜನರು ಈ ವಿಷಕಾರಿ ಮದ್ಯವನ್ನು ಸೇವಿಸಿದ್ದು, ಅಸ್ವಸ್ಥರಾದ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಈ ಬಗ್ಗೆ ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ನೆರವು ಒದಗಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Facebook Comments