ಭಾರತ – ಪಾಕ್ ನಡುವಿನ ಸದ್ಯದ ಪರಿಸ್ಥಿತಿ ಅಪಾಯಕಾರಿಯಾಗಿದೆ : ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ

ವಾಷಿಂಗ್ಟನ್, ಫೆ.23- ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಪುಲ್ವಾಮಾದಲ್ಲಿ ಭೀಕರ ಉಗ್ರರ ದಾಳಿ ಬಳಿಕ ಉಭಯ ದೇಶಗಳ ನಡುವೆ ಅತ್ಯಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ ಟ್ರಂಪ್ ಹೇಳಿದ್ದಾರೆ.

ಇದೇ ವೇಳೆ ಪುಲ್ವಾಮಾ ಘಟನೆಯ ನಂತರ ಭಾರತವು ಮತ್ತಷ್ಟು ಸದೃಢವಾಗಿರುತ್ತದೆ ಎಂಬ ಅಂಶವನ್ನು ಸಹ ಅಮೆರಿಕ ಅಧ್ಯಕ್ಷರು ತಿಳಿಸಿದ್ದಾರೆ. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಲವಾದ ಪೆಟ್ಟು ನೀಡಲು ಭಾರತ ಎದುರು ನೋಡುತ್ತಿದೆ.

ಉಗ್ರ ದಾಳಿಯಲ್ಲಿ 50 ಯೋಧರನ್ನು ಕಳೆದುಕೊಂಡಿದೆ. ಪುಲ್ವಾಮಾ ದಾಳಿ ನಿಜಕ್ಕೂ ದುರದೃಷ್ಟಕರ. ಇದೇ ಘಟನೆ ಎರಡು ದೇಶಗಳ ನಡುವೆ ಅಪಾಯಕಾರಿಯಾಗಿ ಪರಿಣಮಿಸಿದೆ.  ಭಾರತ-ಪಾಕಿಸ್ತಾನದ ನಡುವಿನ ವಿಷಮ ಪರಿಸ್ಥಿತಿಯನ್ನು ತಿಳಿಗೊಳಿಸಲು ನಾವು ಬಯಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.

ಸದ್ಯಕ್ಕೆ ನಾವು ಪಾಕಿಸ್ತಾನಕ್ಕೆ ನೀಡುತ್ತಿದ್ದ 1.3 ಬಿಲಿಯನ್ ಅಮೆರಿಕನ್ ಡಾಲರ್ ಅನುದಾನ ಸ್ಧಗಿತಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಾಕಿಸ್ತಾನದೊಂದಿಗೆ ಸಭೆ ನಡೆಸಿ, ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇವೆ ಎಂದರು.  ಫೆ.14ರಂದು ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರರ ದಾಳಿಯಲ್ಲಿ ಭಾರತದ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು.

Facebook Comments

Sri Raghav

Admin