ಪಾಕ್ ವಿರುದ್ಧ ಕ್ರಿಕೆಟ್ ಆಡುವ ಕುರಿತು ಕೊಹ್ಲಿ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

ವಿಶಾಖಪಟ್ಟಣ, ಫೆ.23- ಪುಲ್ವಾಮಾ ಭಯೋ ತ್ಪಾದಕರ ದಾಳಿ ನಂತರ ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಕ್ರಿಕೆಟ್ ಪಂದ್ಯವನ್ನು ಭಾರತ ಬಹಿಷ್ಕರಿಸಬೇಕೆಂಬ ವ್ಯಾಪಕ ಕೂಗುಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಟೀಮ್ ಇಂಡಿಯಾ ಸಂಪೂರ್ಣ ಬದ್ಧ ಎಂದು ತಂಡದ ನಾಯಕ ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

ವಿಶಾಖಪಟ್ಟಣಂನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ.19ರಂದು ಪಾಕಿಸ್ತಾನದ ವಿರುದ್ಧ ಭಾರತ ಪಂದ್ಯ ಆಡಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.

ಇದಕ್ಕೆ ಭಾರತ ಕ್ರಿಕೆಟ್ ತಂಡ ಸಂಪೂರ್ಣ ಬದ್ಧ ಎಂದು ಪ್ರತಿಕ್ರಿಯಿಸಿದರು. ಈ ವಿಷಯ ಕುರಿತ ಚೆಂಡು ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆ.

ಹೀಗಾಗಿ ಕೇಂದ್ರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಅದರ ತೀರ್ಮಾನಕ್ಕೆ ನಮ್ಮ ಕ್ರಿಕೆಟ್ ತಂಡ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ ಎಂದು ವಿರಾಟ್ ತಿಳಿಸಿದರು.

Facebook Comments