ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಮಾ.6- ಪತಿಯ ಕಿರುಕುಳ ತಾಳಲಾರದೆ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹರಿಹರ ತಾಲೂಕು ಮಲ್ಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭೋವಿ ಕಾಲೋನಿ ನಿವಾಸಿ ಸಾಕಮ್ಮ(32) ಆತ್ಮಹತ್ಯೆಗೆ ಮಾಡಿಕೊಂಡಿರುವ ಪತ್ನಿ.

ಸುರೇಶ್‍ರೊಂದಿಗೆ ಸಾಕಮ್ಮ ಕಳೆದ 8ವರ್ಷಗಳ ಹಿಂದೆ ವಿವಾಹವಾಗಿದ್ದರು. ಪತಿ ಸುರೇಶ್ ಪ್ರತಿದಿನ ಪಾನಮತ್ತನಾಗಿ ಮನೆಗೆ ಬಂದು ಕಿರುಕುಳ ನೀಡುತ್ತಿದ್ದನು. ಇದರಿಂದ ಮನನೊಂದು ಸಾಕಮ್ಮ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿ ಮುಂದಿ ನ ಕ್ರಮ ಕೈಗೊಂಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )