ಮಾ.15 ರಿಂದ 18ರವರಿಗೆ ‘ಮಹಾ’ ಪ್ರಚಾರಕ್ಕೆ ಬಿಜೆಪಿ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ, ಮಾ.13- ಹೈವೋಲ್ಟೆಜ್ ಲೋಕಸಭಾ ಚುನಾವಣೆಗಾಗಿ ಭರ್ಜರಿ ಸಿದ್ಧತೆಯಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮಾ.15ರಿಂದ 18ರವರೆಗೆ ಮಹಾರಾಷ್ಟ್ರದಲ್ಲಿ ಅಬ್ಬರದ ಪ್ರಚಾರಾಂದೋಲನ ಕೈಗೊಳ್ಳಲಿದೆ.

ಮಹಾರಾಷ್ಟ್ರದಲ್ಲಿ ಒಟ್ಟು ಆರು ಬೃಹತ್ ರ‍್ಯಾಲಿಗಳನ್ನು ಆಯೋಜಿಸಿರುವ ಬಿಜೆಪಿ ಈ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಮಹಾಮೈತ್ರಿ ಪಕ್ಷಗಳ ಪ್ರಾಬಲ್ಯವನ್ನು ದುರ್ಬಲಗೊಳಿಸುವ ಉದ್ದೇಶ ಹೊಂದಿದೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಪಕ್ಷದ ಘಟಾನುಘಟಿಗಳು ತಾರಾ ಪ್ರಚಾರಕರಾಗಿ ರ‍್ಯಾಲಿಗಳಲ್ಲಿ ಭಾಗವಹಿಸುವರು.

ಮಾ.15ರಂದು ಅಮರಾವತಿಯಲ್ಲಿ ಬಿಜೆಪಿ ಮೊದಲ ರ‍್ಯಾಲಿ ನಡೆಯಲಿದೆ. ನಂತರ ಮಾ. 16ರಂದು ನಾಗ್ಪುರ, ಮಾ.17ರಂದು ಔರಂಗಾಬಾದ್ ಮತ್ತು ನಾಸಿಕ್ ಹಾಗೂ ಮಾ.18ರಂದು ನವೀ ಮುಂಬೈ ಮತ್ತು ಪುಣೆಗಳಲ್ಲಿ ಚುನಾವಣಾ ಪ್ರಚಾರ ಆಂದೋಲನ ಸಭೆಗಳು ನಡೆಯಲಿವೆ.  ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ಕದನಕೌತುಕ ಕೆರಳಿಸಿದೆ.

Facebook Comments