ರೌಡಿ ಲಕ್ಷ್ಮಣನ ಕೊಲೆಗೆ ಹಂತಕರು ಬಳಸಿದ್ದ ಮಾರಕಾಸ್ತ್ರ, ವಾಹನ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.14- ರೌಡಿ ಲಕ್ಷ್ಮಣನ ಕೊಲೆಗೆ ಹಂತಕರು ಬಳಸಲಾಗಿದ್ದ ವಾಹನಗಳು ಮತ್ತು ಮಾರಕಾಸ್ತ್ರಗಳನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು, ಅವುಗಳನ್ನು ವಶಕ್ಕೆ ಪಡೆದುಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ. ಮಾ.7ರಂದು ರೌಡಿ ಲಕ್ಷ್ಮಣನನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಹಂತಕರ ಪೈಕಿ ಈಗಾಗಲೇ ಮೂವರು ಆರೋಪಿಗಳು ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಕ್ಷ್ಮಣ್ ಹತ್ಯೆಗೆ ಬಳಸಲಾಗಿದ್ದ ಮಾರಕಾಸ್ತ್ರಗಳು ಹಾಗೂ ವಾಹನಗಳ ಬಗ್ಗೆ ಆರೋಪಿಗಳಿಂದ ಬಾಯಿಬಿಡಿಸಿರುವ ಪೊಲೀಸರು ಅವುಗಳನ್ನು ವಶಕ್ಕೆ ತೆಗೆದುಕೊಳ್ಳುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಒಟ್ಟಾರೆ ಈ ಪ್ರಕರಣದಲ್ಲಿ ಯುವತಿ ಸೇರಿದಂತೆ 9 ಮಂದಿಯನ್ನು ಪೊಲೀಸರು ತಮ್ಮ ಖೆಡ್ಡಾಕ್ಕೆ ಬೀಳಿಸಿಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

Facebook Comments