ಮುಂಬೈ ಮೇಲ್ಸೇತುವೆ ಕುಸಿತ, ಸಚಿವ ಪಿಯೂಷ್ ಗೋಯೆಲ್ ರಾಜೀನಾಮೆಗೆ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ.15- ಮುಂಬೈಯಲ್ಲಿನ ಮೇಲ್ಸೇತುವೆ ಕುಸಿದು ಆರು ಮಂದಿ ಮೃತಪಟ್ಟ ದುರಂತಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ರಾಜ್ಯ ಸರ್ಕಾರಗಳೇ ನೇರ ಹೊಣೆಯಾಗಿದ್ದು, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಘಟನೆಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತ ಪ್ರಕರಣದಿಂದ ಮನಸ್ಸಿಗೆ ತುಂಬಾ ನೋವಾಗಿದ್ದು, ಮೃತಪಟ್ಟ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸುತ್ತೇನೆ.

ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜಿವಾಲಾ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನೆಯ ನೇರ ಹೊಣೆ ಹೊತ್ತು ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಮೋದಿ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಅಂಧೇರಿ ಸೇತುವೆ ಕುಸಿತ ಸೇರಿದಂತೆ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

Facebook Comments

Sri Raghav

Admin