ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.16- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು , ಅವರು ಸದ್ಯ ಹೈದರಾಬಾದ್‍ನಲ್ಲಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗಿದ್ದಾರೆ.

ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ ಸಭೆಯೊಂದರಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದ ಅವರು ತೀವ್ರವಾಗಿ ದಣಿದಿದ್ದರು. ಈ ವೇಳೆ ಅವರಿಗೆ ಲಘು ಸ್ತಂಭನವಾಗಿದೆ. ತಕ್ಷಣ ಅವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಇಂದು ರಾತ್ರಿ ವೇಳೆಗೆ ಅವರು ಬೆಂಗಳೂರಿಗೆ ಬರುತ್ತಾರೆ. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಈಗಾಗಲೇ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ್ ಅವರು ಅಲ್ಲಿನ ಆಸ್ಪತ್ರೆಯ ವೈದ್ಯರ ಜತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Facebook Comments