ಮಹಾಸಮರಕ್ಕೆ 18 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ.16-ಮುಂದಿನ ತಿಂಗಳು ನಡೆಯಲಿರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಮರೋಪಾದಿಯಲ್ಲಿ ಸಜ್ಜಾಗಿದ್ದು ತನ್ನ 18 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿರುವ ಮೂರನೇ ಪಟ್ಟಿಯಲ್ಲಿ ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಮುಖುಲ್ ಸಂಗ್ಮಾ, ಅಸ್ಸಾಂನಲ್ಲಿ ಐವರು, ಮೇಘಾಲಯದಲ್ಲಿ ಇಬ್ಬರು, ಉತ್ತರ ಪ್ರದೇಶದಲ್ಲಿ ಒಬ್ಬರು, ಸಿಕ್ಕಿಂ ಮತ್ತು ನಾಗಲ್ಯಾಂಡ್‍ನಲ್ಲಿ ತಲಾ ಒಬ್ಬರು, ತೆಲಂಗಾಣದಲ್ಲಿ ಎಂಟು ಮಂದಿ ಅಭ್ಯರ್ಥಿಗಳಿದ್ದಾರೆ.

ಅಸ್ಸಾಂನ ಸಿಲ್ಚಾರ್ ಲೋಕಸಭೆ ಕ್ಷೇತ್ರದಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಷ್ಮಿತಾ ದೇವ್, ಕಲಿಯಾಬೊರ್ ಕ್ಷೇತ್ರದಿಂದ ಗೌರವ್ ಗೊಗೊಯ ಸ್ಪರ್ಧಿಸಲಿದ್ದಾರೆ. ಇವರಿಬ್ಬರೂ ಹಾಲಿ ಸಂಸದರಾಗಿದ್ದಾರೆ, ಶಿಲ್ಲಾಂಗ್ ನಿಂದ ಮಾಜಿ ಕೇಂದ್ರ ಸಚಿವ ಸಂಸದ ವಿನ್ಸೆಟ್ ಪಾಲಾ, ದಿಬ್ರುಗರ್ ನಿಂದ ಪಬನ್ ಸಿಂಗ್ ಘಟೊವರ್ ಅವರು ಆಯ್ಕೆಯಾಗಿದ್ದಾರೆ.

ಉತ್ತರ ಪ್ರದೇಶ ಮೀಸಲಾತಿ ಕ್ಷೇತ್ರದಿಂದ ಬಾರಾಬಂಕಿಯಿಂದ ದಲಿತ ಮುಖಂಡ ಪಿ ಎಲ ಪುನಿಯಾ ಅವರ ಪುತ್ರ ತನುಜ ಪುನಿಯಾ ಸ್ಪರ್ಧೆಗಿಳಿದಿದ್ದಾರೆ. ಕಾಂಗ್ರೆಸ್ ಇಲ್ಲಿಯವರೆಗೆ ಲೋಕಸಭೆ ಚುನಾವಣೆಗೆ 54 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )