ನನ್ನ ವಿರುದ್ಧ ಯಾರೇ ಸ್ಪರ್ಧಿಸಿದರೂ ಭಯವಿಲ್ಲ : ಡಿವಿಎಸ್

ಈ ಸುದ್ದಿಯನ್ನು ಶೇರ್ ಮಾಡಿ

ಕೆ.ಆರ್.ಪುರ, ಮಾ.16- ನನ್ನ ವಿರುದ್ಧ ಯಾರೇ ಸ್ಪರ್ಧಿಸಲಿ ಯಾವುದೇ ಚಿಂತೆ ಇಲ್ಲ. ಜನ ಬೆಂಬಲ ನನಗಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಪ್ರತಿ ವಾರ್ಡ್‍ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿಗಳು ಎಂದು ವೈಯಕ್ತಿಕವಾಗಿ ಗೌರವವಿದೆ, ಆದರೆ ಜಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾನು ಉತ್ತರ ಲೋಕಸಭೆಗೆ ನಿಂತುಕೊಳ್ಳತ್ತಿದ್ದು ಯಾರೇ ನಿಂತು ಕೊಂಡರೂ ಗೆಲವು ನನ್ನದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿಯವರು ಅಲೆ ಈಗಾಗಲೇ ಎಲ್ಲಾ ಸಮೀಕ್ಷೆಗಳನ್ನು ಧೂಳಿಪಟ ಮಾಡಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿ ಯಾಗಲಿದ್ದಾರೆಂದರು. ಯುವಕರಿಗೆ ಯೂತ್ ಐಕಾನ್ ಆಗಿರುವ ಮೋದಿಯವರು ದೇಶದ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಮ್ಮೆ ಆಯ್ಕೆ ಮಾಡಿ ಎಂದು ಹೇಳಿದರು.

ಕೆಆರ್ ಪುರ ವಾರ್ಡ್ ಪಾಲಿಕೆ ಸದಸ್ಯೆ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿ, ದೇಶ ಬಲಿಷ್ಟ ರಾಷ್ಟ್ರವಾಗಿ ಇನ್ನಷ್ಟು ಅಭಿವೃದ್ಧಿಯಾಗಬೇಕಾದರೆ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ತಿಳಿಸಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆಗಾಗಿ ಬೇಟಿ ಪಡಾವೋ ಬೇಟಿ ಬಚಾವೋ ಜಾರಿಗೆ ತಂದಿದ್ದಾರೆ.

ಪ್ರತಿಯೊಂದು ಹಳ್ಳಿಗೂ ವಿದ್ಯುತ್ ತಲುಪುವಂತೆ ಮಾಡಿದ್ದಾರೆ. ಅವರು ಜಾರಿಗೆ ತಂದಿರುವ ಯೋಜನೆಗಳಿಂದ ಭಾರತ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ನಂದೀಶ್ ರೆಡ್ಡಿ, ಪಾಲಿಕೆ ಮಾಜಿ ಸದಸ್ಯ ವೀರಣ್ಣ, ಚಿದಾನಂದ, ರಮೇಶ್, ಜಗದೀಶ್ ಮತ್ತಿತರರಿದ್ದರು.

Facebook Comments