ಎಐಎಡಿಎಂಕೆ ಪ್ರಣಾಳಿಕೆಯಲ್ಲಿ ‘ಅಮ್ಮ ರಾಷ್ಟ್ರೀಯ ಬಡತನ ನಿರ್ಮೂಲನೆ’ ಯೋಜನೆ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ, ಮಾ.19-ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತಾ ಅವರ ಹೆಸರಿನಲ್ಲಿ ಅಮ್ಮ ರಾಷ್ಟ್ರೀಯ ಬಡತನ ನಿರ್ಮೂಲನೆ ಉಪಕ್ರಮ (ಅನ್ನಿ) ಘೋಷಿಸಿದೆ.

ಚೆನ್ನೈನಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಸಂಚಾಲಕ ಹಾಗೂ ಉಪಮುಖ್ಯಮಂತ್ರಿ ಓ.ಪನ್ನೀರ್‍ಸೆಲ್ವಂ, ಎಐಎಡಿಎಂಕೆ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಅನೇಕ ಯೋಜನೆ ಮತ್ತು ಆಶ್ವಾಸನೆಗಳನ್ನು ಪ್ರಕಟಿಸಿದರು.

ರಾಷ್ಟ್ರೀಯ ಬಡತನ ನಿರ್ಮೂಲನಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮಾಸಿಕ 1500 ರೂ.ಗಳನ್ನು ಅವರ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನೀಟ್ ರದ್ದು: ಡಿಎಂಕೆ ಪ್ರಣಾಳಿಕೆ ಘೋಷಣೆ :  ಇದೇ ವೇಳೆ ಚೆನ್ನೈನಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಎಂ.ಕೆ.ಸಾಲ್ಟಿನ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.  ವೈದ್ಯಕೀಯ ಶಿಕ್ಷಣದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ -ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗುವುದು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಇಂಜಿನಿಯರಿಂಗ್ ಕೋಟಾ ಮೀಸಲಾತಿಯನ್ನು ರದ್ದುಗೊಳಿಸುವುದಾಗಿ ಸ್ಟಾಲಿನ್ ಘೋಷಿಸಿದರು.

ಇದರೊಂದಿಗೆ ಚುನಾವಣಾ ದೃಷ್ಟಿಯನ್ನು ಮುಂದಿಟ್ಟುಕೊಂಡು ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಭರವಸೆ ನೀಡಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )