ಕ್ರಿಕೆಟ್ ಬೆಟ್ಟಿಂಗ್: ಮೂವರು ಬುಕ್ಕಿಗಳ ಸೆರೆ 5.60 ಲಕ್ಷ ರೂ. ಹಣ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.19-ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಮೂವರು ಬುಕ್ಕಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 5.60 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ. ಹೇಮಂತ್(41), ಮುಖೇಶ್‍ಕುಮಾರ್(40) ಮತ್ತು ಪ್ರವೀಣ್‍ಕುಮಾರ್(41) ಬಂಧಿತರು.

ವಿ.ವಿ.ಪುರಂ ಠಾಣಾ ವ್ಯಾಪ್ತಿಯ ಭುರಗಲ್ ಮಠ ರಸ್ತೆ, ಸಾಂಬಾ ಇಂಪೆಕ್ಟ್ ಕಚೇರಿಯಲ್ಲಿ ಮೂವರು ಬುಕ್ಕಿಗಳು ಶ್ರೀಲಂಕಾ-ಸೌತ್‍ಆಫ್ರಿಕಾ ತಂಡಗಳ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ತಂಡಗಳ ಸೋಲು-ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಆ್ಯಪ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಲಭಿಸಿದೆ.

ಈ ಆಧಾರದ ಮೇಲೆ ಸಿಸಿಬಿ ಪೊಲೀಸರು ಘಟನಾ ಸ್ಥಳದ ಮೇಲೆ ಕಾರ್ಯಾಚರಣೆ ನಡೆಸಿ ಮೂವರು ಬುಕ್ಕಿಗಳನ್ನು ವಶಪಡಿಸಿಕೊಂಡು ಜೂಜಾಟಕ್ಕೆ ಸಂಬಂಧಿಸಿದ 5.60 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )