ಮೈತ್ರಿ ಪಕ್ಷಗಳ ನಾಯಕರ ಸಭೆಯಿಂದ ದೂರ ಉಳಿದ ಪರಮೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.19- ತುಮಕೂರು ಲೋಕಸಭಾ ಕ್ಷೇತ್ರ ಕಾಂಗ್ರೆಸ್‍ನಿಂದ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮೈತ್ರಿ ಪಕ್ಷಗಳ ನಾಯಕರ ಸಭೆಯಿಂದ ದೂರ ಉಳಿದಿದ್ದರು.

ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್-ಜೆಡಿಎಸ್ ನಾಯಕರ ಮಹತ್ವದ ಸಭೆ ಖಾಸಗಿ ಹೊಟೇಲ್‍ನಲ್ಲಿ ನಡೆದಿದ್ದು, ಲೋಕಸಭೆ ಚುನಾವಣಾ ಕಾರ್ಯತಂತ್ರದ ಬಗ್ಗೆ ಸಮಾಲೋಚನೆ ನಡೆಸಿದ್ದರು. ಆ ಸಭೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಪಾಲ್ಗೊಂಡಿರಲಿಲ್ಲ.

ತುಮಕೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿರುವ ಬಗ್ಗೆ ಬೇಸರಗೊಂಡಿದ್ದರೂ ತುಮಕೂರು ಕ್ಷೇತ್ರದಲ್ಲಿ ಹಾಲಿ ಸಂಸದರಿರುವುದರಿಂದ ಕಾಂಗ್ರೆಸ್‍ಗೇ ಬಿಟ್ಟುಕೊಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದರು.

ಸಂಸದ ಮುದ್ದ ಹನುಮೇ ಗೌಡರೊಂದಿಗೆ ಎಚ್.ಡಿ.ದೇವೇಗೌಡರು,
ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಕ್ಷೇತ್ರ ಬಿಟ್ಟುಕೊಡುವಂತೆಯೂ ಪರಮೇಶ್ವರ್ ಮನವಿ ಮಾಡಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )