ಕಾರು ಪಲ್ಟಿಯಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಕಾರವಾರ, ಮಾ.21- ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿ ಆದ ಪರಿಣಾಮ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.
ಭಟ್ಕಳದ ಜಾಮೀಯಾ ಸ್ಟ್ರೀಟ್‍ನ ನಿವಾಸಿ ಶಮ್ಮಾಸ್ (19) ಮೃತಪಟ್ಟ ವಿದ್ಯಾರ್ಥಿ.

ಮದರಾಸದಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕೇಂದ್ರಕ್ಕೆ ಭಟ್ಕಳದಿಂದ ಕಾರವಾರದ ಕಡೆಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ಶಮ್ಮಾಸ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು , ಚಿಕಿತ್ಸೆಗಾಗಿ ಅಂಕೋಲಾ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )