ಲಾಲ್ ಬಹದ್ದೂರ್ ಶಾಸ್ತ್ರಿಗೆ ಅಪಮಾನ ಮಾಡಿದ ಪ್ರಿಯಾಂಕ ಗಾಂಧಿ…!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮಾ.21-ಸ್ವಾತಂತ್ರ ಹೋರಾಟಗಾರ ಮತ್ತು ಮಾಜಿ ಪ್ರಧಾನಮಂತ್ರಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅಪಮಾನ ಮಾಡಿದ್ದಾರೆ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಉತ್ತರಪ್ರದೇಶದ ಚುನಾವಣಾ ಪ್ರಚಾರದ ವೇಳೆ ತಮಗೆ ಹಾಕಲಾಗಿದ್ದ ಹೂವಿನ ಹಾರವನ್ನು ಶಾಸ್ತ್ರಿ ಅವರ ಪುತ್ಥಳಿಗೆ ಹಾಕುವ ಮೂಲಕ ರಾಷ್ಟ್ರ ನಾಯಕನಿಗೆ ಪ್ರಿಯಾಂಕ ಅಪಮಾನ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ತಮ್ಮ ಕೊರಳಿನಲ್ಲಿದ್ದ ಪುಷ್ಪಾಹಾರವನ್ನು ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಹಾಕಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸ್ಮೃತಿ ಈ ಕುರಿತ ದೃಶ್ಯವನ್ನು ತಮ್ಮ ಟ್ವಿಟ್‍ರ ಖಾತೆಯಲ್ಲಿ ಟ್ಯಾಗ್ ಮಾಡಿ ಪ್ರಿಯಾಂಕಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕಾ ಅವರ ಈ ಅಸಭ್ಯ ವರ್ತನೆಗೆ ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬೆಂಬಲ ಸೂಚಿಸಿ ದೇಶದ ಮಹಾನ್ ನಾಯಕನಿಗೆ ಅಪಮಾನ ಮಾಡಿದ್ದಾರೆ ಎಂದು ಸ್ಮೃತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin