ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 9 ಬೈಕ್‍ಗಳ ವಶ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.22- ಮನೆ ಮುಂದೆ ನಿಲ್ಲಿಸಿದ್ದಂತಹ ಬೈಕ್‍ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ಉತ್ತರ ವಿಭಾಗದ ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿ 2.02 ಲಕ್ಷ ಬೆಲೆಯ 9 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಲಗ್ಗೆರೆಯ ಚಂದು (19), ವೇಣುಗೋಪಾಲ (19) ಮತ್ತು ಕುರುಬರಹಳ್ಳಿಯ ಶಂಕರ (19) ಬಂಧಿತರು.

ಮಾ.16ರಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ರವಿ ಎಂಬುವವರು ಎದ್ದು ನೋಡಿದಾಗ ಮನೆ ಮುಂದೆ ಇದ್ದ ಬೈಕ್ ಕಳ್ಳತನವಾಗಿದ್ದ ಬಗ್ಗೆ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ಬಂಧನದಿಂದ ನಂದಿನಿ ಲೇಔಟ್ ಠಾಣೆಯ ಆರು ಪ್ರಕರಣ, ಮಹಾಲಕ್ಷ್ಮಿ ಲೇಔಟ್‍ನ ಎರಡು, ಬಸವೇಶ್ವರನಗರ ಠಾಣೆಯ ಒಂದು ಪ್ರಕರಣ ಸೇರಿ ಒಟ್ಟು 9 ದ್ವಿಚಕ್ರ ವಾಹನ ಪತ್ತೆಯಾಗಿವೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )