ಯಾರನ್ನೂ ವೈಯಕ್ತಿಕವಾಗಿ ಟೀಕಿಸಬೇಡಿ : ಸಾ.ರಾ. ಮಹೇಶ್

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮಾ.22- ಯಾವುದೇ ಪಕ್ಷದ ಬೆಂಬಲಿಗರ ಬಗ್ಗೆ ಯಾರೂ ವೈಯಕ್ತಿಕವಾಗಿ ಮಾತನಾಡಬಾರದೆಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು.

ನಟರಾದ ದರ್ಶನ್, ಯಶ್ ವಿಚಾರದಲ್ಲಿ ನಮ್ಮ ಪಕ್ಷದ ಮುಖಂಡರು ವೈಯಕ್ತಿಕವಾಗಿ ಮಾತನಾಡಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದರು. ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಮುಂದೆ ಯಾರೂ ಸಹ ನಟರನ್ನು ವೈಯಕ್ತಿಕವಾಗಿ ಟೀಕಿಸಬೇಡಿ ಎಂದು ಹೇಳಿದರು.

ಮೈತ್ರಿ ಧರ್ಮ ಪಾಲಿಸದ ಕಾರ್ಯಕರ್ತರಿಗೆ ಮೊದಲು ಎಚ್ಚರಿಕೆ ನೀಡಲಾಗುತ್ತದೆ. ನಂತರ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಹೇಳಿದರು.

ಕಾಂಗ್ರೆಸ್ ಕೂಡ ಇದೇ ನಿಲುವು ಪಾಲಿಸುತ್ತಿದೆ. ನಾವೂ ಸಹ ಇದನ್ನು ಪಾಲಿಸಿದರೆ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )