25ಕ್ಕೆ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು,ಮಾ.22-ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್‍ಸಿಂಹ ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ.  ಅಂದು ಬೆಳಗ್ಗೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ 11.30ಕ್ಕೆ ನಾಮಪತ್ರ ಸಲ್ಲಿಸುವರು.

ಬಿಜೆಪಿ ನಿನ್ನೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡಗುಡೆ ಮಾಡಿದ್ದು, ಮೈಸೂರು-ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಹೆಸರನ್ನೇ ಘೋಷಿಸಿದೆ. ಶಾಸಕರಾದ ಶ್ರೀರಾಮುಲು, ರಾಮದಾಸ್,ನಾಗೇಂದ್ರ ಸೇರಿದಂತೆ ನಗರ ಹಾಗೂ ಜಿಲ್ಲಾ ಬಿಜೆಪಿ ಮುಖಂಡರು ಪ್ರತಾಪ್ ಸಿಂಹ ಅವರಿಗೆ ಸಾಥ್ ನೀಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )