ಅನರ್ಹಗೊಳಿಸಿದರೂ ಚುನಾವಣೆಗೆ ಸ್ಪರ್ಧಿಸಲು ಅಡ್ಡಿ ಇಲ್ಲ : ಉಮೇಶ್ ಜಾಧವ್

ಈ ಸುದ್ದಿಯನ್ನು ಶೇರ್ ಮಾಡಿ

ಕಲಬುರಗಿ, ಮಾ.22- ಶಾಸಕ ಸ್ಥಾನದಿಂದ ಅನರ್ಹಗೊಳಿಸಿದರೂ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದಾಗಿದೆ ಎಂದು ಚಿಂಚೋಳಿ ಶಾಸಕ ಡಾ.ಉಮೇಶ್ ಜಾಧವ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ವ ಇಚೆ್ಚುಂದ ರಾಜೀನಾಮೆ ನೀಡಿದ್ದೇನೆ. ಸ್ಪೀಕರ್ ರಮೇಶ್ ಕುಮಾರ್ ಅವರು ತುಂಬ ಒಳ್ಳೆಯವರು. ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಹೊಟ್ಟೆಯಲ್ಲಿ ವಿಶೇಷ ಮಗುವಿದೆ ಎಂದು ಹೆರಿಗೆಗೆ ತೊಂದರೆಯಾಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಡಾ.ಜಾಧವ್ ತಮ್ಮದೇ ಶೈಲಿಯಲ್ಲಿ ಮಾತನಾಡಿದರು.

ನಾನು ಸಂಘರ್ಷ ಮಾಡಿಕೊಳ್ಳುವುದಿಲ್ಲ. ಆದರೆ ನನ್ನ ಹಕ್ಕನ್ನು ಪಡೆಯುತ್ತೇನೆ ಎಂದರು. ನನಗೆ ಟಿಕೆಟ್ ಸಿಗುವುದಿಲ್ಲ ಎಂದು ಕೆಲವರು ಅಪಪ್ರಚಾರ ಮಾಡಿದ್ದರು. ಆದರೆ ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ನನಗೆ ಟಿಕೆಟ್ ನೀಡಿ ಅವರು ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )