ಬಿಎಸ್‍ವೈ 1800 ಕೋಟಿ ಡೈರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಮಾ.23-ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ 1800 ಕೋಟಿ ಡೈರಿ ಆರೋಪ ಪ್ರಕರಣ ಇದೀಗ ಮತ್ತೊಂದು ಟ್ವಿಸ್ಟ್ ಪಡೆದಿದೆ.

ಡೈರಿಯಲ್ಲಿರೋದು ಯಡಿಯೂರಪ್ಪ ಸಹಿ ಅಲ್ಲವೇ ಅಲ್ಲ ಎಂದು ಹೇಳಲಾಗುತ್ತಿದ್ದು, ಡೈರಿಯಲ್ಲಿರುವ ಸಹಿಗೂ ಬಿಎಸ್‍ವೈ ಅವರ ಸಹಿಗೂ ವ್ಯತ್ಯಾಸ ಇದೆ ಎಂದು ಸಹಿಯ ಅಸಲಿ, ನಕಲಿ ಬಗ್ಗೆ ದಾಖಲೆಯನ್ನು ಯಡಿಯೂರಪ್ಪ ಆಪ್ತರು ಬಿಡುಗಡೆ ಮಾಡಿದ್ದಾರೆ.

2009ರಲ್ಲಿ ಸಚಿವರಾಗಿದ್ದ ಶರದ್ ಪವಾರ್‍ಗೆ ಬಿಎಸ್‍ವೈ ಪತ್ರ ಬರೆದಿದ್ದರು. ಈ ಪತ್ರವನ್ನು ಇಂದು ಬಿಎಸ್‍ವೈ ಆಪ್ತರು ಬಿಡುಗಡೆ ಮಾಡುವ ಮೂಲಕ ಕಾಂಗ್ರೆಸ್ ರಿಲೀಸ್ ಮಾಡಿದ ಡೈರಿಯಲ್ಲಿರುವ ಸಹಿಗೂ ಈ ಸಹಿಗೂ ಇರುವ ವ್ಯತ್ಯಾಸವನ್ನು ವಿವರಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ ಯೂರಿಯಾ ಬಗ್ಗೆ ಜುಲೈ 2009ರಲ್ಲಿ ಬಿಎಸ್‍ವೈ ಬರೆದಿದ್ದ ಪತ್ರವನ್ನೂ ಬಿಡುಗಡೆ ಮಾಡುವ ಮೂಲಕ ಸಹಿಯ ಪ್ರತಿ ಅಕ್ಷರ ವ್ಯತ್ಯಾಸ ತೋರಿಸಿ ಮಾರ್ಕ್ ಮಾಡಿ ದಾಖಲೆ ಬಿಡುಗಡೆಗೊಳಿಸಿದ್ದಾರೆ.

ಹಾಗಾದರೆ ಶುಕ್ರವಾರ ಕಾಂಗ್ರೆಸ್ ಬಿಡುಗಡೆ ಮಾಡಿದ ಡೈರಿಯಲ್ಲಿರುವ ಯಡಿಯೂರಪ್ಪನವರ ಸಹಿ ನಕಲಿಯೋ ಅಥವಾ ಅಸಲಿಯೋ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ. ಇತ್ತ ಸಿಬಿಡಿಟಿ ಕೂಡ ಇದು ಬಿಎಸ್‍ವೈ ಅವರ ಕೈ ಬರಹ ಅಲ್ಲ ಎಂದು ಸ್ಪಷ್ಟನೆ ನೀಡಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )