ಸಾರ್ವಜನಿಕ ಸುರಕ್ಷಿತ ಕಾಯ್ದೆಯಡಿ ಕುಖ್ಯಾತಿ ಕ್ರಿಮಿನಲ್ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು,ಮಾ.23-ಜಮ್ಮುಕಾಶ್ಮೀರದ ರಜಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಅಪರಾಧ ಕೃತ್ಯಗಳಿಂದ ಕುಖ್ಯಾತಿ ಪಡೆದಿದ್ದ ಆರೋಪಿ ಹರೋನ್ ರಷಿದ್‍ನನ್ನು ಸಾರ್ವಜನಿಕ ಸುರಕ್ಷಿತ ಕಾಯ್ದೆಯಡಿ ರಜಾರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಜಾರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು. ಬಂಧಿತನು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು,ಈತನ ವಿರುದ ಏಳು ಕ್ರಿಮಿನಲ್ ಪ್ರಕರಣಗಳು ಮತ್ತು ಹಲವು ಮೊಕದ್ದಮೆಗಳನ್ನು ರಜಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಯೋಗಲ್ ಅವರು ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಎಚ್ಚರಿಕೆ ನೀಡಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )