ಕಾಶ್ಮೀರದಲ್ಲಿ ಶಾಂತಿ ಕದಡಲೆತ್ನಿಸಿದ ಹಲವರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು, ಮಾ.23-ಭಯೋತ್ಪಾದನೆ ನಿಗ್ರಹ ಕಾಯ್ದೆ ಅಲೆಯಲ್ಲಿ ಜಮ್ಮು-ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕ್‍ಎಲ್‍ಎಫ್) ಸಂಘಟನೆ ನಿಷೇಧದ ಬೆನ್ನಲ್ಲೆ ಕಾಶ್ಮೀರದಲ್ಲಿ ಶಾಂತಿ ಕದಡಲು ಯತ್ನಿಸಿದ ಹಲವರನ್ನು ಪೊಲೀಸರು ಬಂದಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಪದ್ರವ ಮತ್ತು ಶಾಂತಿ ಕದಡುವ ಪ್ರಯತ್ನಿಸಿದ ಹಲವು ಯುವಕರನ್ನೇ ರಜೌರಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಸಾರ್ವಜನಿಕರಿಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಾನೂನು ಉಲ್ಲಂಘನೆ ಮಾಡಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಉಂಟಾಗದಂತೆ ಪೊಲೀಸರು ಎಚ್ಚರವಹಿಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸ್ ಅಧಿಕಾರಿಗಳ ತಂಡ ಶುಭನ್‍ಕುಮಾರ್, ಸುನಿಲ್‍ಕುಮಾರ್, ಜಾಫರ್ ಸಫೆರಿ ಮತ್ತು ಮೊಹಮ್ಮದ್ ಅಲ್ತ್‍ಫ ಎಂಬುವರನ್ನೆ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತರು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಳೀಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ, ಶಾಂತಿಯುತ ಪ್ರದೇಶಗಳಲ್ಲಿ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿದ್ದರು ಎಂದು ನೌರ್ಶೆ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )