ಡಿ.ಕೆ.ಸುರೇಶ್ ದಬ್ಬಾಳಿಕೆ ವಿರುದ್ಧ ನಮ್ಮ ಹೋರಾಟ : ಸಿ.ಪಿ.ಯೋಗೇಶ್ವರ್

ಈ ಸುದ್ದಿಯನ್ನು ಶೇರ್ ಮಾಡಿ

ಕುಣಿಗಲ್,ಮಾ.24-ಸಂಸದ ಡಿ.ಕೆ.ಸುರೇಶ್ ಅವರ ದಬ್ಬಾಳಿಕೆ ವಿರುದ್ಧ ನಮ್ಮ ಹೋರಾಟ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾದ ಕ್ಷೇತ್ರದ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ಪಟ್ಟಣದಲ್ಲಿ ಆಯೋಜಿಸಲಾಗಿದ್ದ ತಾಲ್ಲೂಕು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ 80 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ಡಿ.ಕೆ.ಸುರೇಶ್ ಗೆಲ್ಲುವಿಗೆ ಶ್ರಮಿಸಿದೆ.

ಆದರೆ ಸಚಿವ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅಧಿಕಾರದ ಮದದಿಂದ ಅಮಾಯಕರ ಮೇಲೆ ದೌರ್ಜನ್ಯ ದಬ್ಬಾಳಿಕೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಅವರನ್ನು ಮನೆಯಲ್ಲಿಯೇ ಕೂರಿಸುವುದು ನನ್ನ ಉದ್ದೇಶ ಎಂದರು.

ಕಳೆದ ಮೂರು ವಿಧಾನಸಭಾ ಚುನಾವಣೆಯಲ್ಲಿ ತಾಲ್ಲೂಕು ಬಿಜೆಪಿ ಮುಖಂಡರಾದ ಕೃಷ್ಣಕುಮಾರ್ ಅವರು ಕಡಿಮೆ ಮತಗಳಲ್ಲಿ ಸೋತಿದ್ದಾರೆ. ಇದು ತುಂಬ ನೋವು ತಂದಿದೆ. ಈ ಚುನಾವಣೆ ಮುಂದೆ ಅವರ ಗೆಲುವಿಗೆ ದಿಕ್ಸೂಚಿಯಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈಗಾಗಲೇ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದವಾಗಿದ್ದು, ಮೈತ್ರಿಯನ್ನು ಒಪ್ಪಿಕೊಳ್ಳುತ್ತಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಪ್ರಧಾನಿ ಮೋದಿ ನಡುವೆ ವಿಶ್ವಾಸವಿದ್ದು ಮುಂದೆ ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಡಿ.ಕೃಷ್ಣಕುಮಾರ್ ಮಾತನಾಡಿ, ಜೆಡಿಎಸ್-ಬಿಜೆಪಿ ಅಣ್ಣ-ತಮ್ಮಂದಿರು ಇದ್ದಂತೆ. ನಾವು ಯಾವತ್ತು ಕಚ್ಚಾಡುವುದಿಲ್ಲ. ಕನಕಪುರದವರನ್ನು ಮಟ್ಟ ಹಾಕುವುದೇ ನಮ್ಮ ಗುರಿ.

ಕ್ಷೇತ್ರದ ಶಾಸಕರು ಕಮಿಷನ್ ಆಧಾರ ಮೇಲೆ ಕೆಲಸ ಮಾಡುತ್ತಿದ್ದು, ವಿನಾಕಾಣ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ. ಶಾಸಕ ಎಂಬ ಪದಕ್ಕೆ ಮಾತ್ರ ಗೌರವ ನೀಡುತ್ತಿದ್ದೇವೆ. ಆದರೆ ರಂಗನಾಥ್ ಅವರು ಇದನ್ನು ದುರುಪಯೋಗಪಡಿಸಿಕೊಂಡರೆ ಮುಂದೆ ಬಾರಿ ಪಶ್ಚಾತ್ತಾಪ ಪಡಬೇಕಾಗುತ್ತದೆ. ಎಂದು ಹೇಳಿದರು.

ಬೆಂಗಳೂರು ನಗರ ಜಿಲ್ಲಾಪಂಚಾಯ್ತಿ ಅಧ್ಯಕ್ಷ ಮುನಿರಾಜು, ಸದಸ್ಯ ಮರಿಸ್ವಾಮಿ, ಮುಖಂಡರಾದ ಬ್ಯಾಟರಂಗೇಗೌಡ, ಕಾರ್ಯಕಾರಣಿ ಸಮಿತಿ ಸದಸ್ಯ ಚಿಕ್ಕರಾಮಯ್ಯ, ರಾಜ್ಯ ಪರಿಷತ್ ಸದಸ್ಯ ನಾರಾಯಣಗೌಡ, ತಾಪಂ ಸದಸ್ಯ ದಿನೇಶ್ ಮತ್ತಿತರರು ಇದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin