ತಲೆ ಮೇಲೆ ಕಲ್ಲು ಎತ್ತಿ ಹಾಕಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಬರ್ಬರ ಹತ್ಯೆ ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮಾ.24- ಎಟಿಎಂ ಕಾವಲುಗಾರನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೌಡಯ್ಯನಪಾಳ್ಯದ ನಿವಾಸಿ ಲಿಂಗಪ್ಪ (62) ಕೊಲೆಯಾದ ಕಾವಲುಗಾರ. ಮೂಲತಃ ಬಾಗಲಕೋಟೆಯವರಾದ ಲಿಂಗಪ್ಪ ಉತ್ತರಹಳ್ಳಿ ಮುಖ್ಯರಸ್ತೆಯ ಕದಿರೇನಹಳ್ಳಿ ಪೆಟ್ರೋಲ್‍ಬಂಕ್ ಸಮೀಪದ ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರದ ಕಾವಲುಗಾರನಾಗಿದ್ದ.

ನಿನ್ನೆ ರಾತ್ರಿ ಲಿಂಗಪ್ಪ ಎಟಿಎಂ ಕೇಂದ್ರದ ಫಸ್ಟ್ ಫ್ಲೋರ್ ನಲ್ಲಿ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಆತನ ಜೇಬಿನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ.

ಇಂದು ಮುಂಜಾನೆ ಫಸ್ಟ್ ಫ್ಲೋರ್ ನಲ್ಲಿ ದ್ದ ಬ್ಯೂಟಿ ಪಾರ್ಲರ್ ಮಾಲೀಕರು ಅಂಗಡಿ ತೆರೆಯಲು ಬಂದಾಗ ಲಿಂಗಪ್ಪ ಕೊಲೆಯಾಗಿರುವುದು ಕಂಡುಬಂದಿದೆ. ಕೂಡಲೇ ಮಾಲೀಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಶವವನ್ನು ಕೆಂಪೇಗೌಡ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಅಣ್ಣಾಮಲೈ ಅವರು ಲಿಂಗಪ್ಪ ಅವರನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು, ಅವರ ಜೇಬಿನಲ್ಲಿದ್ದ ಹಣ ಮಾತ್ರ ಎಗರಿಸಿದ್ದಾರೆ. ಆದರೆ, ಎಟಿಎಂ ದೋಚಲು ಯತ್ನಿಸಿಲ್ಲ ಎಂದು ತಿಳಿಸಿದ್ದಾರೆ.

ಲಿಂಗಪ್ಪ ಅವರನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎರಡು ವಿಶೇಷ ಪೆÇಲೀಸ್ ತಂಡಗಳನ್ನು ರಚನೆ ಮಾಡಿದ್ದು, ಆದಷ್ಟು ಶೀಘ್ರ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin