‘ಕೈ’ ಕೊಡುತ್ತಿರುವ ಮುಖಂಡರು, ರಾಹುಲ್‌ಗೆ ತಲೆನೋವು..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮಾ. 25- ಲೋಕಸಭೆ ಚುನಾವಣೆ ಕಾವು ಏರುತ್ತಿರುವಂತೆ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅದರಲ್ಲೂ ಕಾಂಗ್ರೆಸ್‍ನಲ್ಲಿ ಪಕ್ಷಾಂತರ ಪರ್ವ ತೀವ್ರಗೊಂಡಿದೆ. ಇದರಿಂದ ಕಾಂಗ್ರೆಸ್‍ಗೆ ದೊಡ್ಡ ಆತಂಕ ಎದುರಾಗಿದೆ.

ಚುನಾವಣೆ ದಿನಾಂಕ ಘೋಷಣೆಯಾದ ನಂತರ ಕಾಂಗ್ರೆಸ್ ಪಕ್ಷ ಮುಖಂಡರು ರಾಜಿನಾಮೆ ನೀಡಿ ಅನ್ಯ ಪಕ್ಷಗಳತ್ತ ಜಿಗಿದಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ತಲೆನೋವಾಗಿ ಪರಿಣಮಿಸಿದೆ.

ಮಹಾರಾಷ್ಟ್ರದ ಸಾಂಗ್ಲಿಯ ಪ್ರತೀಕ್ ಪಾಟೀಲ್ ಮತ್ತು ಸತಾರಾದ ರಂಜಿತ್ ಸಿಂಗ್ ನಾಯ್ಕ್ ನಿಂಬಾಳ್ಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ. ಪ್ರತೀಕ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತ್ ದಾದಾ ಪಾಟೀಲ ಅವರ ಪುತ್ರ.

ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಸತಾರದ ಜಿಲ್ಲಾ ಅಧ್ಯಕ್ಷ ಬಿಜೆಪಿ ಸೇರಿರುವ ನಿಂಬಾಳ್ಕರ್ ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಸಚಿವ ಚಂದ್ರಕಾಂತ್ ಪಾಟೀಲ್ ತಿಳಿಸಿದ್ದಾರೆ.

ಇನ್ನು ಕಾಂಗ್ರೆಸ್‍ನ ನಾಯಕರು ಕ್ರಮವಾಗಿ ರಾಜಿನಾಮೆ ನೀಡುತ್ತಿರುವುದು ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )