ಕಬ್ಬುತುಂಬಿದ್ದ ಟ್ರ್ಯಾಕ್ಟರ್ – ಬೊಲೆರೋ ನಡುವೆ ಭೀಕರ ಅಪಘಾತ, 6 ಮಂದಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Gokak-Accident--01
ಬೆಳಗಾವಿ,ಡಿ.4- ಬೊಲೆರೋ ಜೀಪ್ ಮತ್ತು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲ್ಲೂಕು ಹಿರೇನಂದಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.

ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿಕೊಂಡು ಬೊಲೆರೋದಲ್ಲಿ ಗೋಕಾಕ್‍ನ ತಮ್ಮ ಯರಗರವಿ ಗ್ರಾಮಕ್ಕೆ ವಾಪಸಾಗುತ್ತಿದ್ದ ಯಲ್ಲವ್ವ ಖಂಡ್ರೆ (60) , ನೀಲವ್ವ (40), ಅನುಸೂಯ ನಾಯ್ಕರ (38) , ಪಾರವ್ವ ಖಂಡ್ರಿ (30) , ಭಿಮನಪ್ಪ ಪೂಜಾರಿ (38) ಹಾಗೂ ಮಹದೇವ ಎಂಬುವರು ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಬೊಲೆರೋ ಜೀಪ್ ನಜ್ಜುಗುಜ್ಜಾಗಿ ರಸ್ತೆ ಬದಿ ಉರುಳಿ ಬಿದ್ದಿದೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳಲ್ಲಿ ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದೆ. ಟ್ರ್ಯಾಕ್ಟರ್ ಚಾಲಕನು ಕೂಡ ಗಂಭೀರವಾಗಿ ಗಾಯವಾಗಿದೆ.

ಅಪಘಾತದಿಂದಾಗಿ ಕಬ್ಬಿನ ರಾಶಿ ರಸ್ತೆಯಲ್ಲೆಲ್ಲಾ ಚೆಲ್ಲಾಡಿದ್ದು , ಸುಮಾರು ಬೆಳಗ್ಗೆ 6 ಗಂಟೆಯವರೆಗೂ ಈ ಭಾಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಗೋಕಾಕ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಸಾಲು ಗಟ್ಟಿ ನಿಂತಿದ್ದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin