ಕಾಶ್ಮೀರದ ಪುಲ್ವಾಮಾದಲ್ಲಿ 3 ಭಯೋತ್ಪಾದಕರ ಎನ್‍ಕೌಂಟರ್, ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀನಗರ, ಮೇ 16- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳ ಅಟ್ಟಹಾಸ ಮುಂದುವರೆದಿರುವಂತೆಯೇ ಅವರನ್ನು ಮಟ್ಟ ಹಾಕುವ ಕಾರ್ಯಾಚರಣೆ ತೀವ್ರಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ಉಗ್ರರ ಗುಂಡೇಟಿಗೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪುಲ್ವಾಮ ಜಿಲ್ಲೆಯ ದಲಿಫೋರಾದಲ್ಲಿನ ಮನೆಯೊಂದರಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸೇನಾಪಡೆಗಳು ಆಪ್ರದೇಶವನ್ನು ಸುತ್ತುವರೆದರು.

ಯೋಧರನ್ನು ನೋಡುತ್ತಲೇ ಉಗ್ರರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸೇನಾಪಡೆಯ ಓರ್ವ ಯೋಧನಿಗೆ ಗುಂಡೇಟು ತಗುಲಿದ್ದು, ಕೂಡಲೇ ಅವರನ್ನು ಸೇನಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಬಳಿಕ ನಡೆದ ಸುದೀರ್ಘ ಗುಂಡಿನ ಚಕಮಕಿಯಲ್ಲಿ ಈ ವೇಳೆ ಮನೆಯಲ್ಲಿದ್ದ ಉಗ್ರರ ಪೈಕಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮನೆಯಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ. ಮುಂಜಾಗ್ರತಾ ಕ್ರಮವಾಗಿ ದಲಿಫೋರಾ ಪ್ರಾಂತ್ಯದ ಸುತ್ತಮುತ್ತ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಫುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಉಗ್ರಗಾಮಿಗಳ ಚಟುವಟಿಕೆ ತೀವ್ರಕೊಂಡಿದ್ದು, ಅವರ ನಿಗ್ರಹ ಕಾರ್ಯಾಚರಣೆಯನ್ನು ಭದ್ರತಾಪಡೆಗಳು ತೀವ್ರಗೊಳಿಸಿವೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )