‘ನಾವು ಅಣ್ಣ-ತಮ್ಮಂದಿರು ಬಡಿದಾಡಿಕೊಳ್ಳಲ್ಲ’

ಈ ಸುದ್ದಿಯನ್ನು ಶೇರ್ ಮಾಡಿ

ಹೊಳೆನರಸೀಪುರ, ಮೇ 16- ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಎಂದು ಟ್ವಿಟ್ ಮಾಡಿರುವ ವಿಚಾರಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

ರಾಜ್ಯದಲ್ಲಿ ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಹೀಗಾಗಿ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯ ಅವರಿಗೆ ನನ್ನ ಮೇಲೆ ಅಭಿಮಾನವಿದೆ ಮತ್ತು ಒಲವಿದೆ. ಹೀಗಾಗಿ ಆ ರೀತಿ ಅವರು ಟ್ವಿಟ್ ಮಾಡಿರಬಹುದು ಎಂದು ಹೇಳಿದರು.

ನಮಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ವರಿಷ್ಠರಾಗಿದ್ದರು. ಅವರು ಸೂಚಿಸಿದಂತೆ ಕಾರ್ಯನಿರ್ವಹಿಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ