ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ 5851 ಪ್ರಯಾಣಿಕರಿಗೆ ದಂಡ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.24- ಮಾರ್ಚ್ 2019ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40289 ವಾಹನಗಳನ್ನು ತನಿಖೆಗೊಳಪಡಿಸಿ 4596 ಪ್ರಕರಣಗಳನ್ನು ಪತ್ತೆಹಚ್ಚಿ, 5851 ಟಿಕೆಟ್ ರಹಿತ ಪ್ರಯಾಣಿಕರಿಂದ 7,52,806 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.

ನಿಗಮದ ಆದಾಯದಲ್ಲಿ ಸೋರಿಕೆ 1,07,877 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ