ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಭೀಕರ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಮನಗರ, ಮೇ 16- ಕಲ್ಲಿನಿಂದ ವ್ಯಕ್ತಿಯೊಬ್ಬರ ತಲೆಯನ್ನು ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯರ್ರೇಹಳ್ಳಿ ಗ್ರಾಮದ ಪುಟ್ಟರಾಜು (45) ಕೊಲೆಯಾದ ವ್ಯಕ್ತಿ.

ಪುಟ್ಟರಾಜು ಅವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ದುಷ್ಕರ್ಮಿಗಳು ಕಲ್ಲಿನಿಂದ ಅವರ ಮುಖವನ್ನು ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿಯ ಮುಖದ ಗುರುತು ಸಿಗದಂತೆ ತಲೆಯನ್ನು ಜಜ್ಜಿ ಕೊಲೆ ಮಾಡಲಾಗಿದೆ.

ಹಣಕಾಸಿನ ವೈಷಮ್ಯದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರಾಮನಗರ ಗ್ರಾಮಾಂತರ ಠಾಣಾ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )