ಶಾಂತಿಯುತ ಇಂಡೋ-ಪೆಸಿಫಿಕ್ ಪ್ರಾಂತ್ಯಕ್ಕೆ ಭಾರತ-ವಿಯೆಟ್ನಾಂ ಪ್ರತಿಪಾದನೆ

ಈ ಸುದ್ದಿಯನ್ನು ಶೇರ್ ಮಾಡಿ

ಹನೋಯಿ, ಮೇ 10- ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಅಂತಾರಾಷ್ಟ್ರೀಯ ಕಾನೂನುಗಳ ಗೌರವದ ಆಧಾರದ ಮೇಲೆ ಶಾಂತಿಯುತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರಾಂತ್ಯ ನಿರ್ಮಾಣದ ಮಹತ್ವವನ್ನು ಭಾರತ ಮತ್ತು ವಿಯೆಟ್ನಾಂ ಪ್ರತಿಪಾದಿಸಿದೆ.

ಆಗ್ನೇಯ ಏಷ್ಯಾದಲ್ಲಿ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಇಂದು ವಿಯೆಟ್ನಾಂ ರಾಜಧಾನಿ ಹನೋಯಿಯಲ್ಲಿ ತಮ್ಮ ಸಹವರ್ತಿ(ಉಪರಾಷ್ಟ್ರಧ್ಯಕ್ಷ) ಡೋಂಗ್‍ಥೀ ಗೋಕ್ ತೀನ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಸೇರಿದಂತೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಕುರಿತು ಮಹತ್ವ ಸಮಾಲೋಚನೆ ನಡೆಸಿದರು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವೆಂಕಯ್ಯ ನಾಯ್ಡು ವಿಯೆಟ್ನಾಂ ಭೇಟಿಯಿಂದ ತುಂಬಾ ಸಂತಸವಾಗಿದೆ. ನನ್ನ ಸಹವರ್ತಿ ಜೊತೆ ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದರು.

ವಿಯೆಟ್ನಾಂ ಭಾರತದ ಮಿತ್ರರಾಷ್ಟ್ರಗಳಲ್ಲಿ ಒಂದು. ಭಾರತದ ಅತ್ಯಂತ ನಂಬುಗೆಯ ದೇಶ. ಈ ಎರಡು ರಾಷ್ಟ್ರಗಳ ನಡುವೆ ಬಹು ದೀರ್ಘಕಾಲದಿಂದಲೂ ಉತ್ತಮ ಬಾಂಧವ್ಯವಿದೆ. ಅದನ್ನು ಮತ್ತಷ್ಟು ಬಲವರ್ಧಿಸುವ ನಿಟ್ಟಿನಲ್ಲಿ ನಾವಿಬ್ಬರು ಚರ್ಚೆ ನಡೆಸಿದೆವು.

ದ್ವಿಪಕ್ಷೀಯ ಮತ್ತು ಪ್ರಾದೇಶಿಕ-ಅಂತಾರಾಷ್ಟ್ರೀಯ ವಿದ್ಯಮಾನಗಳ ಕುರಿತು ಸಮಾಲೋಚಿಸಿದೆವು ಉಭಯ ದೇಶಗಳ ನಡುವೆ ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ನಾಯ್ಡು ಹೇಳಿದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )