ಅಂಗನವಾಡಿ ಕಾರ್ಯಕರ್ತರ ಗೌರವ ಧನ ಹೆಚ್ಚಳ
ಬೆಂಗಳೂರು, ಮಾ.15– ಅಂಗನವಾಡಿ ಕಾರ್ಯಕರ್ತೆ ಯರು ಮತ್ತು ಸಹಾಯಕಿಯರಿಗೆ ರಕ್ಷಣೆ ಒದಗಿಸಲು ಅಪಘಾತ ವಿಮೆ ಯೋಜನೆ ಜಾರಿಗೆ ತರುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ನೀಡುವ ಗೌರವ ಧನವನ್ನು ಹೆಚ್ಚಿಸಲು ಉದ್ದೇಶಿಸಿದ್ದು, ಅನುಕ್ರಮವಾಗಿ 1000 ಹಾಗೂ 500 ರೂ ಹೆಚ್ಚಿಸಲಾಗುವುದು. ಅತ್ಯಾಚಾರ ಮತ್ತು ವಿವಿಧ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಗಳಲ್ಲಿ ಸ್ಥಾಪಿಸಲಾದ ವಿಶೇಷ ಘಟಕದ ಮಾದರಿಯಲ್ಲಿ ತಾಲ್ಲೂಕು ಆಸ್ಪತ್ರೆಗಳಲ್ಲೂ 145ವಿಶೇಷ ಚಿಕಿತ್ಸಾ ಘಟಕ ಸ್ಥಾಪನೆ ಮಾಡಲಾಗುವುದು.
ಪೌಷ್ಠಿಕಾಂಶ ಕೊರತೆ ನಿವಾರಣೆ: ಪೌಷ್ಠಿಕಾಂಶ ಕೊರತೆ ನಿವಾರಣೆಗೆ ಮಾತೃಪೂರ್ಣ ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ಮುಂದಿನ ಜೂನ್ ತಿಂಗಳಿಂದ ವಾರದಲ್ಲಿ 2 ದಿನ ಮೊಟ್ಟೆ ಮತ್ತು ಜುಲೈನಿಂದ ವಾರಕ್ಕೆ 5 ದಿನ ಹಾಲು ನೀಡಲಾ ಗುವುದು. ಹೆಚ್ಐವಿ ಸೋಂಕಿತ ಹಾಗೂ ಬಾಧಿತರಾದವರಿಗೆ ಪಾಲನೆ ಯೋಜನೆಯಡಿ ನೀಡಲಾಗುವ ಧನ ಸಹಾಯವನ್ನು 800ರಿಂದ 1000ರೂಗೆ ಹೆಚ್ಚಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಮಕ್ಕಳ ವಿಶೇಷ ನ್ಯಾಯಾಲಯ ನಿರ್ಮಿಸಲು 4 ಕೋಟಿ ರೂ ಅನುದಾನ ಘೋಷಿಸಲಾಗಿದೆ.
[ ರಾಜ್ಯ ಬಜೆಟ್ 2017-18 (Live Updates) ]
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS