ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್

ಈ ಸುದ್ದಿಯನ್ನು ಶೇರ್ ಮಾಡಿ

Anganawadi--X4

ಬೆಂಗಳೂರು, ಮಾ.23 : ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.   ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂಗನವಾಡಿ ಸಂಘಟನೆಯ ಪ್ರತಿನಿಧಿಗಳು ನಡೆಸಿದ ಮಾತುಕತೆ ಫಲಕೊಟ್ಟಿದ್ದು, ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯುತ್ತಿರುವುದಾಗಿ ಕರ್ನಾಟಕ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರು ತಿಳಿಸಿದ್ದಾರೆ.

ಏ. 19 ಕ್ಕೆ ನಿಗದಿಯಾಗಿದ್ದ ಕಾರ್ಯಕರ್ತೆಯರ ಸಮಸ್ಯೆ ನಿವಾರಣೆ ವಿಶೇಷ ಸಭೆಯನ್ನು ಏ. 10 ರಂದು ನಡೆಸಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಕೈಬಿಟ್ಟು ತಮ್ಮ ತಮ್ಮ ಊರುಗಳಿಗೆ ವಾಪಸ್ ಮರಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin