ಅಂತರ್ಜಲ ವೃದ್ದಿಗೆ 800 ಕೋಟಿ ರೂ.ಗಳ ಯೋಜನೆಗೆ ಸರ್ಕಾರ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

adgSGSFHGSH

ಬೆಂಗಳೂರು, ಆ.7-ಪದೇ ಪದೇ ನದಿ ನೀರು ಹಂಚಿಕೆ ವಿಷಯದಲ್ಲಿ ಕಾನೂನು ಹೋರಾಟ ನಡೆಸಲು ಕೋಟ್ಯಂತರ ರೂ. ವೆಚ್ಚ ಮಾಡುವುದಕ್ಕಿಂತ  ಸಮುದ್ರಕ್ಕೆ ಸೇರುವ ನೀರನ್ನು ಬಳಸಿಕೊಂಡು ಅಂತರ್ಜಲ ವೃದ್ದಿಗೆ ಸುಮಾರು 800 ಕೋಟಿ ರೂ.ಗಳ ಯೋಜನೆಯೊಂದನ್ನು ರಾಜ್ಯ ಸರ್ಕಾರ ಸಿದ್ಧಪಡಿಸಿದೆ.  ಬರಪೀಡಿತ ಹಾಗೂ ಬಯಲುಸೀಮೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹಲವು ಭಾಗಗಳಲ್ಲಿ ಸಣ್ಣ ಜಲಾಶಯಗಳು ಹಾಗೂ ಚೆಕ್ ಡ್ಯಾಮ್ ನಿರ್ಮಿಸಲು  ಚಿಂತನೆ ನಡೆದಿದೆ.   ವಿಶ್ವ ಬ್ಯಾಂಕ್ ಅಥವಾ ನಬಾರ್ಡ್‍ನಿಂದ ನೆರವು ಪಡೆದು ಈ ಯೋಜನೆಯನ್ನು ಕಾರ್ಯಗತಗೊಳಿಸಲು ನೀಲಿನಕ್ಷೆ ಕೂಡ ಸಿದ್ಧಗೊಂಡಿದೆ ಎಂದು ಹೇಳಲಾಗುತ್ತಿದೆ.

ಸುಮಾರು  2000 ಟಿಎಂಸಿಯಷ್ಟು ನದಿನೀರು ಸಮುದ್ರ ಪಾಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಂಡರೆ ರೈತ ಸಮುದಾಯಕ್ಕೆ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದೆಂದು ತಜ್ಞರು ನೀಡಿದ ವರದಿಯನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ.   ಸದ್ಯದಲ್ಲಿಯೇ ಇದರ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಬ್ಬರು ತಿಳಿಸಿದ್ದಾರೆ.

► Follow us on –  Facebook / Twitter  / Google+

 

Facebook Comments

Sri Raghav

Admin