ಅಂತಾರಾಷ್ಟ್ರೀಯ ಹ್ಯಾಂಡ್‍ಬಾಲ್ ಸ್ಪರ್ಧೆ : ಶಾಂತಾ ವಿದ್ಯಾಸಂಸ್ಥೆಗೆ ದ್ವಿತೀಯ ಸ್ಥಾನ

ಈ ಸುದ್ದಿಯನ್ನು ಶೇರ್ ಮಾಡಿ

chikbalapura

ಚಿಕ್ಕಬಳ್ಳಾಪುರ, ಆ.9- ತಾಲೂಕಿನ ಪೆರೇಸಂದ್ರದ ಶಾಂತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ಮಹಾರಾಷ್ಟ್ರದ ಔರಂಗಬಾದ್‍ನಲ್ಲಿ ಬಿಎಎಂಯು ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ 18 ವರ್ಷದೊಳಗಿನ ಬಾಲಕರು ಮತ್ತು 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಶಾಂತಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡು ಇಂಡೋ-ನೇಪಾಲ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು. ಈಗ ನೇಪಾಳದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಥಮ ಪಿಯುಸಿ ಅರವಿಂದ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾಯಿಕುಮಾರ್ ಆಯ್ಕೆಗೊಂಡವರು. ಇವರು ಥೈಲಾಂಡಿನಲ್ಲಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಹ್ಯಾಂಡಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ತರಬೇತುದಾರ ದೈಹಿಕ ಶಿಕ್ಷಣ ನಿರ್ದೇಶಕ ಆನಂದವೇಲು ಮತ್ತು ತಂಡದ ವ್ಯವಸ್ಥಾಪಕಿ ರೂಪ, ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಿದರು.
ಮ್ಯಾನೇಜಿಂಗ್ ಟ್ರಸ್ಟಿ ಶಾಸಕ ಡಾ ಕೆ.ಸುಧಾಕರ್, ಶಾಂತಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ರೂಪ್ ಕ್ಯಾಪ್ಟನ್ ಜಿ.ಜೆ.ರಾವ್, ವಿದ್ಯಾಸಂಸ್ಥೆಯ ಸಲಹೆಗಾರ ಅಜಿತ್ ಪ್ರಸಾದ್, ಪ್ರಾಂಶುಪಾಲ ವೆಂಕಟಮುನಿರೆಡ್ಡಿ, ಸಹ ಸಂಯೋಜಕ ಬಾಬು ರೆಡ್ಡಿ, ದೈಹಿಕ ಶಿಕ್ಷಣ ಸಂಯೋಜಕರಾದ ಸಂದೇಶ, ರಾಜೇಶ್ ಮುಂತಾದವರು ಉಪಸ್ಥಿತರಿದ್ದರು.

Facebook Comments

Sri Raghav

Admin