ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ವಿರೋಧಿಸಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

njg
ನಂಜನಗೂಡು, ಅ.14- ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಪ್ರಗತಿಪರ ವೇದಿಕೆ ವತಿಯಿಂದ ಪ್ರತಿಭಟನಾ ರ್ಯಾಲಿ ನಡೆಸಿದರು. ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಹೊರಟ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ತಾಲೂಕಿನ ಹೊಸೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಸಗಣಿ ಎರಚಿ ಅವಮಾನಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿದೆ. ಕೊರೆಹುಂಡಿ ಗ್ರಾಮದಲ್ಲಿ ಬದನವಾಳು ಗ್ರಾಮದ ರಮೇಶ್ ಎಂಬಾತನನ್ನು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಇಂತಹ ಹಲವು ಪ್ರಕರಣಗಳು ತಾಲೂಕಿನಲ್ಲಿ ನಡೆಯುತ್ತಿದ್ದು, ಆಡಳಿತ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಹೊಸೂರು ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿದ ಆರೋಪಿಗಳನ್ನು ಗಡಿಪಾರು ಮಾಡಬೇಕು. ಕೊರೆಹುಂಡಿ ಗ್ರಾಮದಲ್ಲಿ ಕೊಲೆಯಾದ ದಲಿತ ಸಮುದಾಯದ ರಮೇಶ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ಉಪತಹಸೀಲ್ದಾರ್ ಶಿವಪ್ರಸಾದ್ ಅವರಿಗೆ ಮನವಿ ನೀಡಿದರು. ದೇವರಸನಹಳ್ಳಿ ಸುರೇಶ್, ದೇವೀರಮ್ಮನಹಳ್ಳಿ ಜಿ.ಬಸವರಾಜು, ಧನರಾಜ್ ಬೂಲ, ಮಹದೇವಸ್ವಾಮಿ ಶಂಕರಪುರ, ಪ್ರಜ್ವಲ್ ಶಶಿ, ಮಹದೇವಸ್ವಾಮಿ, ಪ್ರದೀಪ್, ಕರಿಯಪ್ಪ, ಭದ್ರ, ಗುರುಪ್ರಸಾದ್, ವಿಷ್ಣುವರ್ಧನ, ಮಹೇಶ್, ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Facebook Comments

Sri Raghav

Admin