ಅಕ್ಕೂರಿಗೆ ನುಗ್ಗಿದ ಎರಡು ಕಾಡಾನೆಗಳು, ಜನರಲ್ಲಿ ತೀವ್ರ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

elephant-attack
ರಾಮನಗರ, ನ.5- ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಅಕ್ಕೂರು ಗ್ರಾಮದಲ್ಲಿ ಎರಡು ಕಾಡಾನೆಗಳು ಪ್ರವೇಶಿಸಿದ್ದು, ಗ್ರಾಮಸ್ಥರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.ಈ ಎರಡು ಕಾಡಾನೆಗಳು ಅಕ್ಕೂರಿನ ಪೊಲೀಸ್ ಠಾಣೆ ಬಳಿಯೇ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಉಂಟು ಮಾಡಿದೆ.ಎರಡು ಕಾಡಾನೆಗಳನ್ನು ಕಾಡಿಗೆ ಹಿಂದಿರುಗಿಸಿ ಓಡಿಸಲು ಅರಣ್ಯ ಸಿಬ್ಬಂದಿ ಪೊಲೀಸರು ಮತ್ತು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದಾರೆ. ಈ ಮೊದಲು ಊರು ಹೊರಗಡೆ ಕಾಡಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಆನೆಗಳು ಈಗ ನೇರವಾಗಿ ಊರೊಳಗೆ ನುಗ್ಗಿರುವುದು ಆತಂಕಕ್ಕೆಡೆ ಮಾಡಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin