ಅಕ್ರಮವಾಗಿ ದಾಸ್ತಾನು ಮಾಡಿದ್ದ 121 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Annabhagya--01

ಬಳ್ಳಾರಿ, ಜೂ.6– ಅಕ್ರಮವಾಗಿ ಪಡಿತರ ಅಕ್ಕಿಗಳನ್ನು ದಾಸ್ತಾನು ಮಾಡಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಅನ್ನ ಭಾಗ್ಯ ಪಡಿತರ ಅಕ್ಕಿಗಳನ್ನು ಅಕ್ರಮವಾಗಿ ಸಾಗಣೆ ಮಾಡಿ ಅದನ್ನು ಪಾಲಿಶ್ ಮಾಡಿ ಬ್ರಾಂಡೆಂಡ್ ಸೂಪರ್ ರೈಸ್ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಈ ಅಕ್ರಮ ದಂಧೆಯ ಬಗ್ಗೆ ಸಿಕ್ಕ ಸುಳಿವನ್ನು ಆಧರಿಸಿ ಉಪ ವಿಭಾಗಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ತಂಡ ಜಯರಾಮ್ ಎಂಬುವರ ಗೋದಾಮಿನ ಮೇಲೆ ದಾಳಿ ನಡೆಸಿದೆ.ಈ ವೇಳೆ ಪರಿಶೀಲಿಸಿದಾಗ ಅಕ್ಕಿಯನ್ನು ಪಾಲಿಶ್ ಮಾಡಿ ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಸಾಗಿಸುತ್ತಿರುವುದು ಗೊತ್ತಾಗಿದೆ.  ಲೋಡ್ ಮಾಡುತ್ತಿರುವಾಗಲೇ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಕೆಲವರು ಅಲ್ಲಿಂದ ಪರಾರಿಯಾಗಿದ್ದಾರೆ. 121 ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಆಹಾರ ಇಲಾಖೆಯ ನಿರೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಈ ಸಂಬಂಧ ಬಳ್ಳಾರಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin