ಅಕ್ರಮವಾಗಿ ಶ್ರೀಗಂಧದ ಮರ ಕಡಿದ ಆರೋಪಿಗಳಿಗೆ ದಂಡದ ಜೊತೆ ಜೈಲು ಶಿಕ್ಷೆ

ಈ ಸುದ್ದಿಯನ್ನು ಶೇರ್ ಮಾಡಿ

Jail

ಚಿಕ್ಕಮಗಳೂರು, ಅ.7- ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಬೆಲೆಬಾಳುವ ಶ್ರೀಗಂಧದ ಮರದ ಬುಡ ಹಾಗೂ ಚಕ್ಕೆಯನ್ನು ಕಡಿದ ಆರೋಪಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ನಗರದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಆರೋಪಿಗಳಾದ ಭದ್ರಾವತಿ ತಾಲ್ಲೂಕಿನ ಬೋಮ್ಮನಕಟ್ಟೆ ಗ್ರಾಮದ ಹುಸೇನ್ ಮತ್ತು ನಾಗೇಂದ್ರನಿಗೆ ಶಿಕ್ಷೆ ವಿಧಿಸಲಾಗಿದೆ.2015ರ ಸೆ.12 ರಂದು ಲಕ್ಕವಳ್ಳಿ ಶಾಖೆ 1 ರ ಕರಕುಚ್ಚಿ ವ್ಯಾಪ್ತಿಯಲ್ಲಿ ಶ್ರೀಗಂಧ ಅಕ್ರಮ ಕಡಿತಲೆ ಆಗುತ್ತಿದೆ ಎಂದು ಉಪ ವಲಯ ಅರಣ್ಯಾಧಿಕಾರಿಗಳಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಸಿದ್ಲಿಪುರ ಸರ್ವೆ ನಂ-43ರ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿಗಳು ಪ್ರಕರಣವನ್ನು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶÀ ಡಿ. ಕಂಬೇಗೌಡ ಅವರು ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ರೂ. 50,000 ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎ.ಎಂ ಸುರೇಶ್‍ಕುಮಾರ್ ಮೊಕದ್ದಮೆ ನಡೆಸಿದರು.

 

 

► Follow us on –  Facebook / Twitter  / Google+

Facebook Comments

Sri Raghav

Admin