ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಎಸಿಬಿ ವಶಕ್ಕೆ ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

Jayachandra-01

ಬೆಂಗಳೂರು, ಡಿ.23-ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ದಾಳಿಗೆ ಒಳಗಾಗಿ ಸಿಬಿಐ ವಶದಲ್ಲಿದ್ದ ರಾಜ್ಯ ಯೋಜನಾ ಪ್ರಾಧಿಕಾರದ ಅಧಿಕಾರಿ ಜಯಚಂದ್ರ ಅವರನ್ನು ಹೆಚ್ಚಿನ ವಿಚಾರಣೆಗೆ ಎಸಿಬಿ ವಶಕ್ಕೆ ಪಡೆದಿದೆ.  ಬಾಡಿ ವಾರೆಂಟ್ ಮೇಲೆ ಎಸಿಬಿ ಅಧಿಕಾರಿಗಳು ಎರಡು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.  ಯೋಜನಾ ಪ್ರಾಧಿಕಾರದ ಅಧಿಕಾರಿಯಾಗಿ ಜಯಚಂದ್ರ ಹಾಗೂ ಕಾವೇರಿ ನೀರಾವರಿ ನಿಗಮದ ಎಂಡಿಯಾಗಿದ್ದ ಚಿಕ್ಕರಾಯಪ್ಪ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ಕೋಟ್ಯಂತರ ರೂ. ಹೊಸ ನೋಟುಗಳು ಪತ್ತೆಯಾಗಿದ್ದವು.

ನಂತರ ಜಾರಿನಿರ್ದೇಶನಾಲಯದ , ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದರು. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತಾದರೂ ಜಯಚಂದ್ರ ಅವರಿಗೆ ಬಿಡುಗಡೆ ಭಾಗ್ಯ ದೊರೆತಿರಲಿಲ್ಲ. ಬಾಡಿ ವಾರೆಂಟ್ ಮೇಲೆ ಸಿಬಿಐ ಅಧಿಕಾರಿಗಳು ಜಯಚಂದ್ರ ಅವರನ್ನು ವಿಚಾರಣೆಗೆ ವಶಕ್ಕೆ ಪಡೆದಿದ್ದರು. ಈಗ ಎಸಿಬಿ ಅಧಿಕಾರಿಗಳು ವಿಚಾರಣೆಗೆ ವಶಕೆ ಪಡೆದಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin