ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾತ್ರ ಕ್ರಮ : ಸಿದ್ದಾರ್ಥನಾಥ್ ಸಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Siddarthanath-Singh

ಲಕ್ನೋ, ಮಾ.27– ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉತ್ತರಪ್ರದೇಶ ಸರ್ಕಾರ ಸ್ಪಷ್ಟಪಡಿಸುವ ಮೂಲಕ ಈ ಕುರಿತು ರಾಜ್ಯದಾದ್ಯಂತ ಎದ್ದಿರುವ ಗೊಂದಲ ನಿವಾರಿಸಲು ಮುಂದಾಗಿದೆ.   ನಾನು ಅಕ್ರಮ ಮತ್ತು ಕಾನೂನು ಬಾಹಿರ ಕಸಾಯಿ ಕಾರ್ಖಾನೆಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುತ್ತಿದ್ದೇವೆ. ಲೈಸನ್ಸ್ ಹೊಂದಿರುವ ಕಸಾಯಿ ಖಾನೆಗಳು ನೀತಿ, ನಿಯಮ ಮತ್ತು ನಿಬಂಧನೆಗಳಿಗೆ ಬಿದ್ದವಾಗಿರಬೇಕು ಎಂದು ಆರೋಗ್ಯ ಸಚಿವ ಸಿದ್ದಾರ್ಥನಾಥ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಅಕ್ರಮ ಮತ್ತು ಯಾಂತ್ರೀಕೃತ ಕಸಾಯಿಖಾನೆಗಳಿಗೆ ಬೀಗ ಜಡಿಯುತ್ತಿರುವ ಹಿನ್ನೆಲೆಯಲ್ಲಿ ಮಾಂಸ ಮಾರಾಟಗಾರರು ಇಂದಿನಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಬೆನ್ನಲ್ಲೇ ಸರ್ಕಾರ ಈ ಹೇಳಿಕೆ ನೀಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin