ಅಕ್ರಮ ಮರಳು ಸಾಗಣೆ : ಕಾವಲುಗಾರರ ಮೇಲೆ ಟ್ರ್ಯಾಕ್ಟರ್ ಹರಿಸಿದ ಚಾಲಕ

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಳ್ಳಕೆರೆ, ಜ.14- ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಕಾವಲುಗಾರರ ಮೇಲೆ ಚಾಲಕ ಟ್ರ್ಯಾಕ್ಟರ್ ಹರಿಸಿದ್ದರಿಂದ ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ದೊಡ್ಡ ಉಳ್ಳಾರ್ತಿ ಅಮೃತ್ ಮಹಲ್‍ನ ಇಸ್ರೋ ಕಂಪೆನಿಯ ಪಂಪ್ ಹೌಸ್ ಬಳಿ ನಡೆದಿದೆ. ಕಾವಲುಗಾರ ಲೋಕೇಶ್ ಕಾಲಿಗೆ ಗಂಭೀರ ಗಾಯವಾಗಿದ್ದು, ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೋರ್ವ ಕಾವಲುಗಾರ ಕೆಂಚಲಿಂಗಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಾಲ್ಲೂಕಿನ ಇಸ್ರೋ ಕಂಪೆನಿಗೆ ಸೇರಿದ ಸ್ಥಳದಿಂದ ಕೆಲವು ದಿನಗಳಿಂದ ಅಕ್ರಮ ಮರಳು ಸಾಗಣೆ ಮಾಡುತ್ತಿರುವ ಬಗ್ಗೆ ತಿಳಿದು ಕಾವಲುಗಾರರಾದ ಲೋಕೇಶ್ ಹಾಗೂ ಕೆಂಚಲಿಂಗಪ್ಪ ತಡೆಯಲು ಹೋದಾಗ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕ ತಿಪ್ಪೇಸ್ವಾಮಿ ಏಕಾಏಕಿ ಇವರ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾನೆ. ನಂತರ ಟ್ರ್ಯಾಕ್ಟರ್‍ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.  ತಳಕು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ತಾಲ್ಲೂಕಿನಾದ್ಯಂತ ಅಕ್ರಮ ಮರಳು ಸಾಗಾಣಿಕೆ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಇದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ. ಅಕ್ರಮ ತಡೆಗೆ ಮುಂದಾದವರ ಮೇಲೆ ದೌರ್ಜನ್ಯ ಎಸಗುವುದು ಸಾಮಾನ್ಯವಾಗುತ್ತಿದೆ. ಇದರಿಂದ ಹಲವಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Facebook Comments

Sri Raghav

Admin