ಅಡಿಕೆ ಬೆಲೆಗೆ ಬೆಂಬಲ ಬೆಲೆ ಕುರಿತು ಚರ್ಚಿಸಲು ಸದ್ಯದಲ್ಲಿಯೇ ಸರ್ವ ಪಕ್ಷ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

aDIKE

ಬೆಂಗಳೂರು,ಆ.13- ಅಡಿಕೆ ಮತ್ತು ತೆಂಗು ಬೆಳೆಗಾರರು ಬೆಳೆ ಕುಸಿತದಿಂದಾಗಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿದ್ದಾರೆ. ಇದೇ ಮಂಗಳವಾರ ಸರ್ವ ಪಕ್ಷಗಳ ಸಭೆ ಕರೆದು ಈ ಸಂಬಂಧ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಅಡಿಕೆ ಮತ್ತು ತೆಂಗು ಬೆಳೆಗಾರರ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿಗೆ ಕರೆದೊಯ್ದಾಗ ಅವರು ಈ ರೀತಿ ಭರವಸೆ ನೀಡಿದರು.
ಸರ್ವ ಪಕ್ಷಗಳ ಸಭೆಯಲ್ಲಿ ಚಚಿಸಿದ ನಂತರ ಪ್ರಧಾನಿ ಬಳಿಗೂ ಸರ್ವ ಪಕ್ಷಗಳ ನಿಯೋಗವನ್ನು ಕರೆದೊಯ್ದು ಅಡಿಕೆ- ತೆಂಗು ಬೆಳಗಾರರಿಗೆ ಬೆಂಬಲ ಬೆಲೆ ನೀಡುವಂತೆ ಮನವಿ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.   ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತಿತರರು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ತೆಂಗು ಅಡಿಕೆಗೆ ಬೆಂಬಲಬೆಲೆ ನೀಡುವಂತೆ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ, ರೈತರು ಪಾದಯಾತ್ರೆ ಕೈ ಬಿಡುವಂತೆ ಮನವಿ ಮಾಡಿಕೊಂಡರು.

► Follow us on –  Facebook / Twitter  / Google+

Facebook Comments

Sri Raghav

Admin